30/05/2026
ಮತ್ತಾ. 10:8-10: "8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; *ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.*
9 ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ
10 ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. *ಆಳು ಅಂಬಲಿಗೆ ಯೋಗ್ಯನಷ್ಟೆ.*
"ಮಾರ್ಕ. 6:7-9: "7 ಆತನು ಹಳ್ಳಿಪಳ್ಳಿಗಳನ್ನು ಸುತ್ತಿಕೊಂಡು ಉಪದೇಶ ಮಾಡುತ್ತಾ ಬಂದನು. ಮತ್ತು ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬರಿಬ್ಬರಾಗಿ ಕಳುಹಿಸಲಾರಂಭಿಸಿದನು. ಕಳುಹಿಸುವಾಗ ಅವರಿಗೆ ದೆವ್ವಗಳ ಮೇಲೆ ಅಧಿಕಾರಕೊಟ್ಟು - 8 ಕೋಲು ಹೊರತು ದಾರಿಗೆ *ಏನೂ ತಕ್ಕೊಂಡು ಹೋಗಬೇಡಿರಿ;* ಬುತ್ತಿ, ಹಸಿಬೆ, ಹಮ್ಮೀಣಿಯಲ್ಲಿ ದುಡ್ಡು ಬೇಡ,
9 ಕೆರಗಳನ್ನು ಮೆಟ್ಟಿಕೊಳ್ಳಬಹುದು. ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿರಿ ಎಂದು ಅಪ್ಪಣೆಕೊಟ್ಟನು."
ಲೂಕ. 9:2-4: "2 *ದೇವರ ರಾಜ್ಯದ ವಿಷಯವನ್ನು ಸಾರುವದಕ್ಕೂ* ಅಸ್ವಸ್ಥರಾದವರನ್ನು ಸ್ವಸ್ಥಮಾಡುವದಕ್ಕೂ ಅವರನ್ನು ಕಳುಹಿಸಿದನು. 3 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - *ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ,* ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು. 4 ಇದಲ್ಲದೆ ನೀವು ಯಾವ ಮನೆಯಲ್ಲಿ ಇಳುಕೊಂಡರೂ ಅಲ್ಲೇ ಇರ್ರಿ. ಅಲ್ಲಿಂದಲೇ ಹೊರಡಿರಿ."
ಲೂಕ. 10:3-4,9: "3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ.
4 ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ;. ...
9,,,, - *ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ."*