Jaya Karnataka Janapara Vedike

Jaya Karnataka Janapara Vedike JKJV Jaya Karnataka Janapara Vedike (JKJV) is a nonprofit organization that aims at improving the quality of life for the people of Karnataka.

A truly democratic, non-political organization that has originated in response to the ever increasing problems of the people of this state. The list of woes is endless, such as, disparities in our society, the widening gap between the rich and the poor, corruption and inefficiency in our political system, an administrative system that has ignored the cries of the common man, the farmers, the stude

nts, homeless labourers, deprivation of women's rights, commercialisation of education and medical sector, food adulteration, the list is endless. The solution is when every single person in the government machinery is held accountable. JKJV aims to be a transparent bridge between the government and the common man. We also strongly believe in the principle, "Of the People, By the People, For the People" and aim at empowering the common man to fight for his rights, to say NO to corruption, NO to exploitation, to demand and get what rightfully belongs to him. Jaya Karnataka Janapara Vedike
Head Office Address:
# 912, 9th floor, Barton Center, M.G.Road, Bengaluru - 560 001. Contact: +91 9900044299
Email: [email protected], [email protected]

ಗಜೇಂದ್ರಗಡ: ಮನೆ ನಿರ್ಮಾಣ ಕಾಮಗಾರಿ ವಿಳಂಬ ಖಂಡಿಸಿ ಜಯಕರ್ನಾಟಕ ಜನಪರ ವೇದಿಕೆ ತಹಶೀಲ್ದಾರ್‌ ಅವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು...
06/08/2026

ಗಜೇಂದ್ರಗಡ: ಮನೆ ನಿರ್ಮಾಣ ಕಾಮಗಾರಿ ವಿಳಂಬ ಖಂಡಿಸಿ ಜಯಕರ್ನಾಟಕ ಜನಪರ ವೇದಿಕೆ ತಹಶೀಲ್ದಾರ್‌ ಅವರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಆತ್ಮೀಯರೆ,

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಹಾಲಪ್ಪವರವಿ ಅವರ ಸಹಕಾರದೊಂದಿಗೆ, ಗದಗ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಣ್ಣಯಲ್ಲಪ್ಪ ಒಳಗೇರಿ ಅವರ ನೇತೃತ್ವದಲ್ಲಿ,

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಗಜೇಂದ್ರಗಡ ತಾಲೂಕು ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಹಶಿಲ್ದಾರರ ಮೂಲಕ ಗದಗ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 2022–23ನೇ ಸಾಲಿನಲ್ಲಿ 300 ಮನೆಗಳ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಕಾಮಗಾರಿ ವಿಳಂಬ ನೀತಿ ಅನುಸರಿಸುತ್ತಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಫಲಾನುಭವಿಗಳಿಗೆ ತೀವ್ರ ಅನ್ಯಾಯವಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿ, ಗುತ್ತಿಗೆದಾರರ ಬಳಿ ಕಾರ್ಮಿಕರ ಕೊರತೆ ಉಂಟಾದ ಕಾರಣ ಆರಂಭದಲ್ಲೇ ಮನೆಗಳ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಬಳಿಕ ಮಂಡಳಿಯ ಸಹಾಯಕ ಅಭಿಯಂತರರು ಹಾಗೂ ಗುತ್ತಿಗೆದಾರರು ಫಲಾನುಭವಿಗಳ ಸಭೆ ನಡೆಸಿ, "ಕಾರ್ಮಿಕರ ಕೊರತೆಯಿರುವುದರಿಂದ ನೀವೇ ಸ್ವಂತ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳಿ. ನಂತರ ಅನುದಾನದ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುವುದು" ಎಂದು ಭರವಸೆ ನೀಡಿದ್ದರು.

ಅಧಿಕಾರಿಗಳ ಈ ಮಾತನ್ನು ನಂಬಿದ ಅನೇಕ ಫಲಾನುಭವಿಗಳು ಸಾಲ ಮಾಡಿ ಮನೆ ನಿರ್ಮಾಣ ಆರಂಭಿಸಿದರೂ, ಇಂದಿಗೂ ಅನುದಾನದ ಹಣ ಬಿಡುಗಡೆಯಾಗದೇ ಹಲವು ಮನೆಗಳು ಅರ್ಧಕ್ಕೆ ನಿಂತಿದ್ದು, ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿನ್ನೆಲೆಯಲ್ಲಿ, ಈಗಾಗಲೇ ಸಂಪೂರ್ಣ ಮನೆ ನಿರ್ಮಿಸಿಕೊಂಡಿರುವ ಫಲಾನುಭವಿಗಳಿಗೆ ಬಾಕಿ ಇರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅಲ್ಲದೆ, ಗುತ್ತಿಗೆದಾರರಿಗೆ ಬಿಲ್ ಪಾವತಿಸುವ ಮೊದಲು ಕಾಮಗಾರಿಯ ಪರಿಶೀಲನೆ ನಡೆಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಅಪೂರ್ಣಗೊಂಡಿರುವ ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಂಘಟನೆಯ ಪದಾಧಿಕಾರಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಗಜೇಂದ್ರಗಡ ತಾಲ್ಲೂಕು ಘಟಕದ ಕಳಕಪ್ಪ ಪೋತ, ಕಳಕಪ್ಪ ಹಾಳಕೇರಿ, ಎಸ್.ಎಸ್. ಬಂಡಾರಿ, ಎಂ.ಜಿ. ರಾಜೋಳಿ, ಕೆ.ಐ. ಕೆಂಚಿ, ಸುಭಾಷ್ ಜಾದವ್, ನವೀನ್ ಪತ್ತಿ, ಮೊಹಮ್ಮದ್ ರಫಿ, ಮುದುಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಕಲಬುರಗಿ: ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ತಕ್ಷಣ ಸ್ಪಂದಿಸಿದ ಜಯ ಕರ್ನಾಟಕ ಜನಪರ ವೇದಿಕೆಆತ್ಮೀಯರ...
30/07/2026

ಕಲಬುರಗಿ: ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ತಕ್ಷಣ ಸ್ಪಂದಿಸಿದ ಜಯ ಕರ್ನಾಟಕ ಜನಪರ ವೇದಿಕೆ

ಆತ್ಮೀಯರೆ,

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ಕೆಲವರು ಪ್ರಜ್ಞಾಹೀನರಾದ ಘಟನೆಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಲಬುರಗಿ ಜಿಲ್ಲಾ ಹಾಗೂ ತಾಲ್ಲೂಕು ಘಟಕ ತೀವ್ರ ಕಳವಳ ವ್ಯಕ್ತಪಡಿಸಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ, ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಯಾವುದೇ ವಿಳಂಬವಿಲ್ಲದೆ ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು. ಅಲ್ಲದೆ, ಮಕ್ಕಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ತಕ್ಷಣ ದೊರೆಯುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿದರು.

ಘಟನೆಯ ಗಂಭೀರತೆಯನ್ನು ಮನಗಂಡು ಸ್ಥಳಕ್ಕೆ ಆಗಮಿಸಿದ ಮಾನ್ಯ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಸೂಕ್ತ ಕ್ರಮ ಜಾರಿಯಾಗುವವರೆಗೆ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಹೋರಾಟ ಮಾಡಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಸರ್ಕಾರವನ್ನು ಕೆಳಕಂಡಂತೆ ಒತ್ತಾಯಿಸಿದೆ:

1. ಘಟನೆಯ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಬೇಕು.
2. ಆಹಾರದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು.
3. ನಿರ್ಲಕ್ಷ್ಯ ತೋರಿದ ಅಧಿಕಾರಿಗಳು, ಸಿಬ್ಬಂದಿ ಅಥವಾ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಹಾಗೂ ಇಲಾಖಾ ಕ್ರಮ ಕೈಗೊಳ್ಳಬೇಕು.
4. ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆ ಕುರಿತು ವಿಶೇಷ ಪರಿಶೀಲನೆ ನಡೆಸಬೇಕು.
5. ಇಂತಹ ದುರ್ಘಟನೆಗಳು ಮರುಕಳಿಸದಂತೆ ಶಾಶ್ವತ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಜಾರಿಗೊಳಿಸಬೇಕು.

"ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ಜಯ ಕರ್ನಾಟಕ ಜನಪರ ವೇದಿಕೆಯ ಹೋರಾಟ ಮುಂದುವರಿಯಲಿದೆ" ಎಂದು ಕಲಬುರಗಿ ಜಿಲ್ಲಾ ಅಫಜಲಪುರ ತಾಲ್ಲೂಕು ಘಟಕದ ಅಧ್ಯಕ್ಷರಾದ ಮುತ್ತುಕುರಿಮಣಿ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಧಾರವಾಡ: ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕಾರ್ಗಿಲ್ ಸ್ತೂಪಕ್ಕೆ ಪುಷ್ಪನಮನಆತ್ಮೀಯರೆ,ಕಾರ್ಗಿಲ್ ವಿಜಯೋತ್ಸವ ದಿನ...
26/07/2026

ಧಾರವಾಡ: ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ಕಾರ್ಗಿಲ್ ಸ್ತೂಪಕ್ಕೆ ಪುಷ್ಪನಮನ

ಆತ್ಮೀಯರೆ,

ಕಾರ್ಗಿಲ್ ವಿಜಯೋತ್ಸವ ದಿನದ ಅಂಗವಾಗಿ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಕಾರ್ಗಿಲ್ ಸ್ಮಾರಕ ಸ್ತೂಪಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರಿಗೆ ಗೌರವಪೂರ್ವಕ ನಮನ ಸಲ್ಲಿಸಲಾಯಿತು.

ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಅವರ ಸಹಕಾರದೊಂದಿಗೆ, ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಕಾರ್ಗಿಲ್ ಯುದ್ಧದ ಅಮರ ವೀರರ ಶೌರ್ಯ, ತ್ಯಾಗ ಹಾಗೂ ದೇಶಭಕ್ತಿಯನ್ನು ಸ್ಮರಿಸಲಾಯಿತು. ಪುಷ್ಪಾಂಜಲಿ ಅರ್ಪಿಸುವ ಮೂಲಕ ಭಾರತದ ಸಶಸ್ತ್ರ ಪಡೆಗಳ ಪರಾಕ್ರಮಕ್ಕೆ ಗೌರವ ಸಲ್ಲಿಸಿ, ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರಪ್ರೇಮದ ಸಂದೇಶವನ್ನು ಸಾರಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ ಜಾದವ, ರವೀಂದ್ರ ಮಾನೆ, ಪ್ರಮೋದ ಶೆಟ್ಟಿ, ಸಿಕಂದರ ಮುಲ್ಲಾ, ನವೀನ್ ಪಾಟೀಲ, ಸಂಜಯ್ ರಜಪೂತ್, ನವೀನ್ ಬಾರ್ಕೆರ, ರಾಜು ಅಳಗವಾಡಿ, ಅನ್ವರ್ ನದಾಫ್, ಸಂಜಯ್ ಇಂಗಳೆ, ಹರ್ಷದ ಪಠಾಣ್, ಗುರು ಸುಣಗಾರ, ಪ್ರಾಂಚಿಸ್ ಡಿಕೋಸಾ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜೈ ಹಿಂದ್! 🇮🇳
ಭಾರತ ಮಾತಾ ಕೀ ಜೈ! 🇮🇳

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಆತ್ಮೀಯರೆ,ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಬಲಪಡಿಸುವ ಉದ್...
26/07/2026

ಆತ್ಮೀಯರೆ,

ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಬಲಪಡಿಸುವ ಉದ್ದೇಶದಿಂದ ಜಯಕರ್ನಾಟಕ ಜನಪರ ವೇದಿಕೆಯ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ "ಹೆಲ್ಮೆಟ್ ಧರಿಸಿ – ಜೀವ ಉಳಿಸಿ, ಡ್ರಗ್ಸ್ ಮುಕ್ತ ಕಲಬುರಗಿ–ಆರೋಗ್ಯಕರ ಸಮಾಜ ನಿರ್ಮಿಸಿ" ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಜನಜಾಗೃತಿ ಬೈಕ್ ರ‍್ಯಾಲಿಯ ಸುದ್ದಿಯನ್ನು ವಿವಿಧ ದಿನಪತ್ರಿಕೆಗಳಲ್ಲಿ ಪ್ರಕಟಿಸಿದ ಮಾಧ್ಯಮ ಸ್ನೇಹಿತರಿಗೆ ಧನ್ಯವಾದಗಳು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಕಲಬುರಗಿ: "ಹೆಲ್ಮೆಟ್ ಧರಿಸಿ – ಜೀವ ಉಳಿಸಿ, ಡ್ರಗ್ಸ್ ಮುಕ್ತ ಕಲಬುರಗಿ–ಆರೋಗ್ಯಕರ ಸಮಾಜ ನಿರ್ಮಿಸಿ" ಸಂದೇಶದೊಂದಿಗೆ ಜಯಕರ್ನಾಟಕ ಜನಪರ ವೇದಿಕೆಯಿ...
26/07/2026

ಕಲಬುರಗಿ: "ಹೆಲ್ಮೆಟ್ ಧರಿಸಿ – ಜೀವ ಉಳಿಸಿ, ಡ್ರಗ್ಸ್ ಮುಕ್ತ ಕಲಬುರಗಿ–ಆರೋಗ್ಯಕರ ಸಮಾಜ ನಿರ್ಮಿಸಿ" ಸಂದೇಶದೊಂದಿಗೆ ಜಯಕರ್ನಾಟಕ ಜನಪರ ವೇದಿಕೆಯಿಂದ ಜನಜಾಗೃತಿ ಬೈಕ್ ರ‍್ಯಾಲಿ ಯಶಸ್ವಿ

ಆತ್ಮೀಯರೆ,

ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪವನ್ನು ಬಲಪಡಿಸುವ ಉದ್ದೇಶದಿಂದ ಜಯಕರ್ನಾಟಕ ಜನಪರ ವೇದಿಕೆಯ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ "ಹೆಲ್ಮೆಟ್ ಧರಿಸಿ – ಜೀವ ಉಳಿಸಿ, ಡ್ರಗ್ಸ್ ಮುಕ್ತ ಕಲಬುರಗಿ–ಆರೋಗ್ಯಕರ ಸಮಾಜ ನಿರ್ಮಿಸಿ" ಎಂಬ ಘೋಷವಾಕ್ಯದೊಂದಿಗೆ ಜನಜಾಗೃತಿ ಬೈಕ್ ರ‍್ಯಾಲಿಯನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ. ಗುಣರಂಜನ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ರಾಜ್ಯಾಧ್ಯಕ್ಷರಾದ ಶ್ರೀ ಜೆ. ಶ್ರೀನಿವಾಸ್, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್. ರಾಮಚಂದ್ರಯ್ಯ ಅವರ ಸಲಹೆ ಹಾಗೂ ರಾಜ್ಯ ಸಲಹೆಗಾರರಾದ ಶ್ರೀ ಉಮೇಶ್ ಬಿರಬಿಟ್ಟೆ ಅವರ ಸಹಕಾರದೊಂದಿಗೆ, ಕಲಬುರಗಿ ಜಿಲ್ಲಾ ಪ್ರಭಾರಿ ಅಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ನಾಮದಾರ ಅವರ ಅಧ್ಯಕ್ಷತೆಯಲ್ಲಿ ಈ ಜನಜಾಗೃತಿ ರ‍್ಯಾಲಿ ನಡೆಯಿತು.

ಇತ್ತೀಚಿನ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ವ್ಯಸನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿತ್ತು. ರ‍್ಯಾಲಿಯ ಮೂಲಕ ಹೆಲ್ಮೆಟ್ ಧರಿಸುವ ಮಹತ್ವ, ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯತೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಪರಿಣಾಮಕಾರಿ ಸಂದೇಶ ನೀಡಲಾಯಿತು.

ಈ ಜನಜಾಗೃತಿ ಅಭಿಯಾನಕ್ಕೆ ಸಾರ್ವಜನಿಕರು, ಯುವಕರು ಹಾಗೂ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ವಿರೋಧಿ ಹೋರಾಟಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ ಎಂಬ ಸಂದೇಶವನ್ನು ಯಶಸ್ವಿಯಾಗಿ ತಲುಪಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಅನುಮತಿ, ಭದ್ರತೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿದ ಕಲಬುರಗಿ ನಗರ ಪೊಲೀಸ್ ಇಲಾಖೆ, ಸಂಚಾರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ, ರ‍್ಯಾಲಿಯಲ್ಲಿ ಭಾಗವಹಿಸಿದ ಸಾರ್ವಜನಿಕರು, ಯುವಕರು, ವಿದ್ಯಾರ್ಥಿಗಳು, ಮಾಧ್ಯಮ ಪ್ರತಿನಿಧಿಗಳು ಹಾಗೂ ಜಯಕರ್ನಾಟಕ ಜನಪರ ವೇದಿಕೆಯ ಜಿಲ್ಲಾ, ತಾಲ್ಲೂಕು, ನಗರ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಸಂಘಟನೆಯ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಕಲಬುರಗಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಸದಾಶಿವ ಕ್ಷತ್ರಿಯ, ಅಫಜಲಪುರ ತಾಲೂಕು ಅಧ್ಯಕ್ಷರಾದ ಶ್ರೀ ಮುತ್ತು ಕುರಿಮನಿ, ಯಡ್ರಾಮಿ ಮುಖಂಡರಾದ ಶ್ರೀ ಜಗದೀಶ್ ಮಡಿವಾಳ, ಜೇವರ್ಗಿ ಅಧ್ಯಕ್ಷರಾದ ಶ್ರೀ ಸತೀಶ್ ಜೆ., ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಂಚಾರ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ತಿಪಟೂರು: ಖ್ಯಾತ ಗಾಯಕಿ ಎಸ್.ಜಾನಕಿ ಅವರ  ಸ್ಮರಣಾರ್ಥ ಜಯಕರ್ನಾಟಕ ಜನಪರ ವೇದಿಕೆ ತಿಪಟೂರು ತಾಲ್ಲೂಕು ಘಟಕದಿಂದ ಶಾಲಾ ಮಕ್ಕಳಿಗೆ ಕಲಿಕಾ ಪರಿಕರ ವ...
25/07/2026

ತಿಪಟೂರು: ಖ್ಯಾತ ಗಾಯಕಿ ಎಸ್.ಜಾನಕಿ ಅವರ ಸ್ಮರಣಾರ್ಥ ಜಯಕರ್ನಾಟಕ ಜನಪರ ವೇದಿಕೆ ತಿಪಟೂರು ತಾಲ್ಲೂಕು ಘಟಕದಿಂದ ಶಾಲಾ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ

ಆತ್ಮೀಯರೆ,

ನಮ್ಮ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಜೆ.ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ, ರಾಜ್ಯ ಕಾರ್ಯಾಧ್ಯಕ್ಷರಾದ ಶ್ರೀ ಹೆಚ್.ರಾಮಚಂದ್ರಯ್ಯ ಅವರ ಸಲಹೆಯೊಂದಿಗೆ, ತುಮಕೂರು ಜಿಲ್ಲಾ ಅಧ್ಯಕ್ಷರಾದ ಶ್ರೀಧರ್ ಅವರ ಸಹಕಾರದೊಂದಿಗೆ, ತಿಪಟೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀ ಬಿ.ಟಿ.ಕುಮಾರ್ ಅವರ ನೇತೃತ್ವದಲ್ಲಿ,

ತಿಪಟೂರು ತಾಲ್ಲೂಕಿನ ಮೀಸೆತಿಮ್ಮನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಇತ್ತೀಚೆಗೆ ನಿಧನರಾದ ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ತಮ್ಮ ಹಾಡುಗಾರಿಕೆಯಿಂದ ಅಸಂಖ್ಯಾತ ಅಭಿಮಾನಿಗಳ ಮನಗೆದ್ದಿದ್ದ ಖ್ಯಾತ ಗಾಯಕಿ ಎಸ್.ಜಾನಕಿ ಅವರ ಸ್ಮರಣಾರ್ಥ ಉಚಿತ ನೋಟ್ ಪುಸ್ತಕ ಮತ್ತು ಕಲಿಕಾ ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಲವಾರು ಮುಖ್ಯ ಅಥಿತಿಗಳಾಗಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಂಘಸಂಸ್ಥೆಗಳ ಮುಖಂಡರು ಸೇರಿದಂತೆ ಅನೇಕರು ಭಾಗವಹಿಸಿ ಜಯಕರ್ನಾಟಕ ಜನಪರ ವೇದಿಕೆ ಕಾರ್ಯವನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು, ಮುಖಂಡರು, ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು, ಶಿಕ್ಷಕರು, ಪತ್ರಕರ್ತರು ಸೇರಿದಂತೆ ಇತರರು ಇದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಕಲಬುರಗಿ: ಉಡಚಾಣ ಗ್ರಾಮಕ್ಕೆ ವಿದ್ಯಾರ್ಥಿಗಳಿಗಾಗಿ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಜಯಕರ್ನಾಟಕ ಜನಪರ ವೇದಿಕೆ ಮನವಿಆತ್ಮೀಯರೆ,ಜಯಕರ್ನಾಟಕ ಜನಪರ ...
25/07/2026

ಕಲಬುರಗಿ: ಉಡಚಾಣ ಗ್ರಾಮಕ್ಕೆ ವಿದ್ಯಾರ್ಥಿಗಳಿಗಾಗಿ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲು ಜಯಕರ್ನಾಟಕ ಜನಪರ ವೇದಿಕೆ ಮನವಿ

ಆತ್ಮೀಯರೆ,

ಜಯಕರ್ನಾಟಕ ಜನಪರ ವೇದಿಕೆಯ ಅಫಜಲಪುರ ತಾಲ್ಲೂಕು ಅಧ್ಯಕ್ಷರಾದ ಮುತ್ತು ಕುರಿಮನಿ ಅವರ ನೇತೃತ್ವದಲ್ಲಿ, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಉಡಚಾಣ ಗ್ರಾಮಕ್ಕೆ ವಿದ್ಯಾರ್ಥಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ, ಅಫಜಲಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ (ಕೆಎಸ್ಆರ್‌ಟಿಸಿ) ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳು ಪ್ರತಿದಿನ ಶಾಲೆ ಮತ್ತು ಕಾಲೇಜುಗಳಿಗೆ ಸಂಚಾರ ಮಾಡಲು ತೊಂದರೆ ಅನುಭವಿಸುತ್ತಿದ್ದು, ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಳಿಗ್ಗೆ ಹಾಗೂ ಸಂಜೆ ನಿಗದಿತ ವೇಳಾಪಟ್ಟಿಯಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಶೇರ್ ಘಟಕ ಅಧ್ಯಕ್ಷ ನಂದಕುಮಾರ್ ಹರಳ್ಯ, ರಾಹುಲ್ ಶಿಂದೆ, ಅಮಿತ್ ಗೌಡ ಪಾಟೀಲ್, ಸಂಗಮೇಶ್ ಸೊನ್ನ ಸೇರಿದಂತೆ ಸಂಘಟನೆಯ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಬೆಂಗಳೂರು: ಯಶಸ್ವಿಯಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರಆತ್ಮೀಯರೆ,ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಜಾಗೃತಿ ಮೂಡಿಸುವ...
20/07/2026

ಬೆಂಗಳೂರು: ಯಶಸ್ವಿಯಾಗಿ ನಡೆದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ

ಆತ್ಮೀಯರೆ,

ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಜಯ ಕರ್ನಾಟಕ ಜನಪರ ವೇದಿಕೆಯ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಘಟಕದ ವತಿಯಿಂದ ಆಯೋಜಿಸಲಾದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವು ಯಶಸ್ವಿಯಾಗಿ ನೆರವೇರಿತು.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಯೋಗೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯಕೀಯ ಸಲಹೆಗಳನ್ನು ಪಡೆದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಜೆ. ಶ್ರೀನಿವಾಸ್, ರಾಜ್ಯ ಕಾರ್ಯಾಧ್ಯಕ್ಷರಾದ ಹೆಚ್. ರಾಮಚಂದ್ರಯ್ಯ, ರಾಜ್ಯ ಮಹಾ ಪ್ರಧಾನ ಸಂಚಾಲಕರಾದ ಶೆ.ಭೊ. ರಾಧಾಕೃಷ್ಣ, ರಾಜ್ಯ ಉಪಾಧ್ಯಕ್ಷರಾದ ಉದಯ್ ಶೆಟ್ಟಿ, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಹಾಗೂ ಕಿರಣ್ ಕುಮಾರ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್. ಪುಷ್ಪಲತಾ, ರಾಜ್ಯ ವಕೀಲರ ಘಟಕದ ಅಧ್ಯಕ್ಷರಾದ ಮಂಜುನಾಥ್, ವಕೀಲರಾದ ರವಿ, ಮಹದೇವಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶಂಕರ್ ಗೌಡ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅಂಬರೀಶ್, ಬಿಟಿಎಂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಮಧುಸೂದನ್, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಮಣಿ, ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ವೇಲು ಸೇರಿದಂತೆ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲಾ ವೈದ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ ಸಂಘಟನೆಯ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

ಆತ್ಮೀಯರೆ,ಮಾಗಡಿ. ಗಾಂಜಾ ಮುಕ್ತ ಮಾಗಡಿಯನ್ನಾಗಿ ಮಾಡಲು ಒತ್ತಾಯಿಸಿ ಜಯಕರ್ನಾಟಕ ಜನಪರ ವೇದಿಕೆ ನೀಡಿದ ಮನವಿಯನ್ನು ವಿವಿಧ ದಿನಪತ್ರಿಕೆಗಳಲ್ಲಿ ಪ್...
14/07/2026

ಆತ್ಮೀಯರೆ,

ಮಾಗಡಿ. ಗಾಂಜಾ ಮುಕ್ತ ಮಾಗಡಿಯನ್ನಾಗಿ ಮಾಡಲು ಒತ್ತಾಯಿಸಿ ಜಯಕರ್ನಾಟಕ ಜನಪರ ವೇದಿಕೆ ನೀಡಿದ ಮನವಿಯನ್ನು ವಿವಿಧ ದಿನಪತ್ರಿಕೆಗಳಲ್ಲಿ ಪ್ರಕಟಿಸಿದ ಪತ್ರಿಕಾ ಸ್ನೇಹಿತರಿಗೆ ಧನ್ಯವಾದಗಳು.

ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.

Address

JAYA KARNATAKA JANAPARA VEDIKE (Regd. ) #912, 9th Floor, Barton Center, M. G. Road
Bangalore
560001

Opening Hours

Monday 9:30am - 6pm
Tuesday 9:30am - 6pm
Wednesday 9:30am - 6pm
Thursday 9:30am - 6pm
Friday 9:30am - 6pm
Saturday 9:30am - 6pm

Alerts

Be the first to know and let us send you an email when Jaya Karnataka Janapara Vedike posts news and promotions. Your email address will not be used for any other purpose, and you can unsubscribe at any time.

Contact The School

Send a message to Jaya Karnataka Janapara Vedike:

Shortcuts

Share