18/08/2026
🌟 ವಿಶ್ವ ಯುವ ಕೌಶಲ್ಯ ದಿನಾಚರಣೆ 2026 | ಜಿಟಿಟಿಸಿ ವಿದ್ಯಾರ್ಥಿಗಳು ಭಾಗಿ
ವಿಶ್ವ ಯುವ ಕೌಶಲ್ಯ ದಿನಾಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ KSDC ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ GTTC ವತಿಯಿಂದ ವಿಶೇಷ ಸ್ಟಾಲ್ ತೆರೆಯಲಾಗಿದ್ದು, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಭೋದ್ ಯಾದವ್ ಸೇರಿದಂತೆ ಹಲವು ಗಣ್ಯರು GTTC ಸ್ಟಾಲ್‌ಗೆ ಭೇಟಿ ನೀಡಿ, ವಿದ್ಯಾರ್ಥಿಗಳ ತಾಂತ್ರಿಕ ಪರಿಣತಿ ಹಾಗೂ ಪ್ರದರ್ಶನಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶಾಂಘೈನಲ್ಲಿ ನಡೆಯಲಿರುವ WorldSkills ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಯುವ ಕೌಶಲ್ಯ ಪ್ರತಿಭೆಗಳಿಗೆ ಸನ್ಮಾನ ನೆರವೇರಿಸಲಾಯಿತು. GTTCಯ ನಾಲ್ಕು ಪ್ರತಿಭಾವಂತ ವಿದ್ಯಾರ್ಥಿಗಳೂ ಈ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ.
🇮🇳 ಕೌಶಲ್ಯಯುತ ಯುವಜನತೆ – ಜಾಗತಿಕ ವೇದಿಕೆಯಲ್ಲಿ ಭಾರತದ ಹೆಮ್ಮೆ!
📞 ಸಹಾಯವಾಣಿ: 155267
🌐 gttc.karnataka.gov.in