29/07/2026
ಬೆಳಗಾವಿ ನಗರದ ಮೂಲಸೌಕರ್ಯ ವೃದ್ಧಿ, ಸ್ವಚ್ಛತೆ ಹಾಗೂ ಸಾರ್ವಜನಿಕ ಸೇವೆಗಳ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸುವರ್ಣ ವಿಧಾನಸೌಧದ ಕೊಠಡಿ ಸಂಖ್ಯೆ 354ರಲ್ಲಿ ಬೆಳಗಾವಿ ಮಹಾನಗರಪಾಲಿಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (BUDA) ಹಾಗೂ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಬೆಳಗಾವಿ ನಗರದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನಗಳನ್ನು ನೀಡಲಾಯಿತು.
🔹ನಗರದ ಎಲ್ಲಾ ಸಾರ್ವಜನಿಕ ಶೌಚಾಲಯಗಳು ಸದಾ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರಬೇಕು. ಸ್ವಚ್ಛತೆ, ನೈರ್ಮಲ್ಯ ಹಾಗೂ ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು.
🔹 ಸರಕಾರಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಶೇ.60ರಷ್ಟು ಕನ್ನಡ ನಾಮಫಲಕ ಅಳವಡಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ .
🔹 ನಗರಾಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸೂಚನೆ.
🔹ನಗರದ ಹಳೆಯ ಘನತ್ಯಾಜ್ಯ (Legacy Waste)ವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಆರೋಗ್ಯಕರ ನಗರ ವಾತಾವರಣ ನಿರ್ಮಾಣ.
🔹 ಹಾಳಾಗಿರುವ ರಸ್ತೆಗಳನ್ನು ತ್ವರಿತವಾಗಿ ಗುರುತಿಸಿ, ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.
ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿ, ಸ್ವಚ್ಛತೆ ಹಾಗೂ ಜನರಿಗೆ ಉತ್ತಮ ಸಾರ್ವಜನಿಕ ಸೇವೆಗಳನ್ನು ಒದಗಿಸುವುದು ನಗರಾಭಿವೃದ್ಧಿ ಇಲಾಖೆಯ ಪ್ರಮುಖ ಆದ್ಯತೆಯಾಗಿದೆ.
ಸಭೆಯಲ್ಲಿ ಬೆಳಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಆಸೀಫ್ ರಾಜ ಶೇಟ್, ಬೆಳಗಾವಿ ನಗರಾಭಿವೃದ್ಧಿ ಅಧ್ಯಕ್ಷರಾದ (ಬೂಡಾ) ಶ್ರೀ ಲಕ್ಷ್ಮಣ ರಾವ್ ಜಿಂಗಳೆ,
ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಪ್ರೀತಿ ಕಾವಕರ್,
ಉಪ ಮಹಾಪೌರರಾದ ಶ್ರೀ ಹಣಮಂತ ಕೊಂಗಾಲಿ ಬೆಳಗಾವಿ ಪಾಲಿಕೆ ಆಯುಕ್ತರಾದ ಶ್ರೀ ಕಾರ್ತಿಕ್, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ಶ್ರೀಮತಿ ಕವಿತಾ ವಾರಂಗಲ್, ಬೆಳಗಾವಿ ನಗರಾಭಿವೃದ್ಧಿ ಆಯುಕ್ತರಾದ ಶ್ರೀ ಶಕೀಲ್ ಅಹ್ಮದ್ ಇನ್ನಿತರ ಅಧಿಕಾರಿಗಳು ಹಾಜರಿದ್ದರು.
#ನಗರಾಭಿವೃದ್ಧಿಇಲಾಖೆ #ಬೆಳಗಾವಿ