28/06/2026
ಈ ಸುದ್ದಿ ಈಗಲೂ ನಂಬಲಾಗುತ್ತಿಲ್ಲ….
ಈ ಸಾವು ನ್ಯಾಯವೇ…?
ಅಪರೂಪದ ಗೆಳೆಯ, ನಿರುಪದ್ರವಿ, ಸಜ್ಜನಿಕೆಯ ಸ್ನೇಹಮಯಿ, ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸತೀಶ ಶೇಜವಾಡಕರ ಅವರ ಅಕಾಲಿಕ ಅಗಲಿಕೆ ಅತೀವ ದುಃಖವನ್ನುಂಟು ಮಾಡಿದೆ. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ.🙏
ಬಿಜೆಪಿ ಓಬಿಸಿ ಮೋರ್ಚಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಶ್ರೀ ಸತೀಶ್ ಶೇಜವಾಡಕರ್ ರವರು ಇಂದು ಬೆಳಿಗ್ಗೆ ಹೃದಯಘಾತದಿಂದ ನಮ್ಮನ್ನು ಅಗಲಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ, ಹಾಗೂ ಅವರ ಕುಟುಂಬದವರಿಗೆ ಮತ್ತು ಬಂಧು ಮಿತ್ರರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.