Viveka Udyoga Mela-2017 organised by Vivekananda Vidyavardhaka Sangha

  • Home
  • India
  • Puttur
  • Viveka Udyoga Mela-2017 organised by Vivekananda Vidyavardhaka Sangha

Viveka Udyoga Mela-2017 organised by Vivekananda Vidyavardhaka Sangha Mega Udyoga Mela (JOB Fair) -2016
@
Vivekananda Campus Puttur
(Registrations Started)

16/01/2017
ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭಪುತ್ತೂರು: ಇಲ್ಲಿನ ವಿವ...
06/12/2016

ವಿವೇಕಾನಂದ ಕ್ಯಾಂಪಸ್‌ನಲ್ಲಿ ಬೃಹತ್ ಉದ್ಯೋಗಮೇಳಕ್ಕೆ ಸಿದ್ಧತೆ
ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ
ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಲ್ಲಿನ ಸಮಗ್ರ ಅಭ್ಯುದಯಕ್ಕೆ ಪಣ ತೊಟ್ಟು ಕಾರ್ಯಪ್ರವೃತ್ತವಾಗಿದೆ. ಅದರ ಮುಂದುವರೆದ ಭಾಗವಾಗಿ, ಉದ್ಯೋಗ ಕ್ಷೇತ್ರದ ಬಗೆಗೆ ಸರಿಯಾದ ಮಾಹಿತಿ, ಜ್ಞಾನ ದೊರಕದೆ ಉದ್ಯೋಗಹೀನರಾಗಿ ಗ್ರಾಮಗಳಲ್ಲುಳಿದ ಯುವ ಸಮೂಹವನ್ನು ಗಮನದಲ್ಲಿರಿಸಿ ಈ ಮೇಳ ಆಯೋಜಿತವಾಗಿದೆ. 2017 ರ ಜನವರಿ 13 ರಂದು ಈ ಉದ್ಯೋಗಮೇಳ ಆಯೋಜನೆಗೊಳ್ಳುತ್ತಿದ್ದು, ಸುಮಾರು ಮುನ್ನೂರಕ್ಕೂ ಅಧಿಕ ಕಂಪೆನಿಗಳನ್ನು ಸಂಪರ್ಕಿಸಲಾಗಿದೆ. ರಾಜ್ಯ ಹಾಗೂ ಹೊರರಾಜ್ಯದ ಅನೇಕ ಸಂಸ್ಥೆಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಿ ಈ ಭಾಗದ ಯುವಕ ಯುವತಿಯರಿಗೆ ಉದ್ಯೋಗ ಕೊಡುವುದಕ್ಕೆ ಉತ್ಸಾಹ ತೋರಿವೆ. ಮಾಹಿತಿ ತಂತ್ರಜ್ಞಾನ, ರಿಯಲ್ ಎಸ್ಟೇಟ್, ಬ್ಯಾಂಕಿಂಗ್, ರಿಟೇಲ್ ಕ್ಷೇತ್ರದ ಉದ್ಯಮ, ಉತ್ಪಾದನಘಟಕಗಳೇ ಮೊದಲಾದ ಅನೇಕ ಉದ್ಯಮಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಲಿವೆ.
ಯಾರು ಭಾಗವಹಿಸಬಹುದು?
ಪ್ರಾಥಮಿಕ, ಪ್ರೌಢಶಾಲಾ ಮಟ್ಟದಿಂದ ತೊಡಗಿ ಪಾರಂಪರಿಕ ಪದವಿಗಳಾದ ಬಿ.ಎ, ಬಿ.ಎಸ್ಸಿ, ಬಿ.ಕಾಂ ಮುಂತಾದ ಪದವೀಧರರು, ಐಟಿಐ, ಡಿಪ್ಲಮೋದಂತಹ ವಿಷಯ ವೃತ್ತಿ ಶಿಕ್ಷಣ ಪಡೆದವರು, ಇಂಜಿನಿಯರಿಂಗ್, ಎಂ.ಬಿ.ಎ ಮೊದಲಾದ ವೃತ್ತಿಪರ ಶಿಕ್ಷಣ ಹೊಂದಿದವರು, ಹೀಗೆ ಇನ್ನೂ ಹಲವಾರು ವಿಷಯಗಳಲ್ಲಿ ಪ್ರಶಿಕ್ಷಿತರೂ ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ರಾಜ್ಯದ ಯಾವುದೇ ಭಾಗದ ಉದ್ಯೋಗಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು.
ಏನು ಮಾಡಬೇಕು?
ಈಗಾಗಲೇ ಈ ಉದ್ಯೋಗ ಮೇಳದ ಹಿನ್ನಲೆಯಲ್ಲಿ ವೆಬ್­ಸೈಟ್ ಒಂದನ್ನು ರೂಪಿಸಲಾಗಿದೆ. ಆ ವೆಬ್ ಸೈಟ್‌ನಲ್ಲಿರುವ ಅರ್ಜಿಯನ್ನು ತುಂಬಿ ಭಾಗವಹಿಸುವ ಉಮೇದುಗಾರಿಕೆಯನ್ನು ನೋಂದಾವಣೆ ಮಾಡಬೇಕು. ವೆಬ್­ಸೈಟ್ ವಿಳಾಸ: www.vivekaudyoga.com ವೆಬ್‌ಸೈಟ್‌ನಲ್ಲಿ ದಾಖಲೆ ಮಾಡಲು ಸಾಧ್ಯವಾಗದವರು ನೆಹರುನಗರದ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ರೂಪಿಸಲಾಗಿರುವ ಉದ್ಯೋಗ ಮೇಳದ ಮಾಹಿತಿ ಕೇಂದ್ರಕ್ಕೆ ನೇರವಾಗಿ ಆಗಮಿಸಿ ಅಥವಾ 810565044 ಈ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು. ತಮ್ಮ ಹೆಸರನ್ನು ದಾಖಲೆ ಮಾಡಿಕೊಂಡವರಿಗೆ ಕೆಲವು ದಿನಗಳ ಅನಂತರ ಉದ್ಯೋಗ ಮೇಳಕ್ಕೆ ಆಗಮಿಸುವಾಗಿನ ಸಿದ್ಧತೆಯ ಬಗೆಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ಈ ಮಾಹಿತಿ ಕೇಂದ್ರ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ತೆರೆದಿರುತ್ತದೆ ಎಂದು ಉದ್ಯೋಗ ಮೇಳ ಸಮಿತಿಯ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹ ಬೌದ್ಧಿಕ್ ಪ್ರಮುಖ್ ಆಗಿರುವ ಶ್ರೀ ಮುಕುಂದ ಅವರು ನವೆಂಬರ್ 11 ರಂದು www.vivekaudyoga.com ವೆಬ್­ಸೈಟ್­ನ್ನು ಅನಾವರಣಗೊಳಿಸಿದರು. ಈ ಸಂದರ್ಭ ಕಾಲೇಜಿನ ಗಣ್ಯರು ಉಪಸ್ಥಿತರಿದ್ದರು.

06/12/2016

Mega Udyoga Mela (JOB Fair) -2016
@
Vivekananda Campus Puttur
(Registrations Started)

Vivekananda Vidyavardhaka Sangha for the first time hosting mega job fair at Vivekananda Nehru Nagar Campus. This job fair aims at connecting thousands of rural and urban unemployed youths. The main motto of Vivekananda Vidyavardhaka Sangha is developing rural areas, and this udyoga mela is being conducted in this view. Already the sangha has adopted many villages and is the reason for their development. As an added benefit to this, in order to develop knowledge base about jobs and employment among the rural area people, this job fair event is organised on January 13, 2017. Recruiters from more than 300 companies of the state and from outside states are visiting the campus. Recruiters from various sectors like Real estate, Banking/Insurance/finance, Retail, Manufacturing, Automobile, IT, BPOs, Telecom, Engineering, construction etc will be invited.

Address

Puttur
574203

Opening Hours

Monday 9am - 5pm
Tuesday 9am - 5pm
Wednesday 9am - 5pm
Thursday 9am - 5pm
Friday 9am - 5pm
Saturday 9am - 5pm
Sunday 9am - 5pm

Alerts

Be the first to know and let us send you an email when Viveka Udyoga Mela-2017 organised by Vivekananda Vidyavardhaka Sangha posts news and promotions. Your email address will not be used for any other purpose, and you can unsubscribe at any time.

Shortcuts

Share