12/08/2026
ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision - SIR) ಕುರಿತು ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಶ್ರೀಮತಿ ಸುರೇಖಾ ಮುರಳೀಧರ್, ಮಾಜಿ ಉಪಮೇಯರ್, ಅವರು ಯುವ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಪರಿಷ್ಕರಣೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾನದ ಮಹತ್ವದ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಲವರ್ಧನೆಗೆ ಜವಾಬ್ದಾರಿಯುತ ಮತದಾರರಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್‌ನ ಅಧ್ಯಕ್ಷೆ ಶ್ರೀಮತಿ ಮಮತಾ ಸುಧೀಂದ್ರ ವಹಿಸಿ, ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳ ಅಗತ್ಯತೆಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಶಿವಪ್ರಸಾದ್ ಬಿ. ಎಸ್. ಹಾಗೂ ಇನ್ನರ್ ವೀಲ್ ಕ್ಲಬ್‌ನ ಕಾರ್ಯದರ್ಶಿ ಶ್ರೀಮತಿ ನಿರ್ಮಲಾ ಕೆ. ಪಿ., ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.