EO TP Koratagere

EO TP Koratagere Contact information, map and directions, contact form, opening hours, services, ratings, photos, videos and announcements from EO TP Koratagere, Education, Koratagere, Tumkur.

ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು...
01/11/2024

ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ತಾಲ್ಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೊರಟಗೆರೆ ತಾಲ್ಲೂಕು ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿಯ ಸ್ವಚ್ಛತಾಗಾರರಿಗೆ ಪೌರಕಾರ್ಮಿಕರ ವಿಭಾಗದ ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಲಾಯಿತು.
ಇದೆ ವೇಳೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
Zilla Panchayath Tumkur
DC Tumakuru

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾ...
01/11/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿಗಳು ಸೇರಿದಂತೆ ತಾಲ್ಲೂಕು ಪಂಚಾಯಿತಿ ಹಾಗೂ ನರೇಗಾ ಸಿಬ್ಬಂದಿ ಹಾಜರಿದ್ದರು.

Zilla Panchayath Tumkur
DC Tumakuru
Rural Development and Panchayat Raj - Government of Karnataka
RDPR Karnataka

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಇರಕಸಂದ್ರ ಕಾಲೋನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಹಾತ್ಮ ಗಾಂಧ...
30/10/2024

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಇರಕಸಂದ್ರ ಕಾಲೋನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ ನಿರ್ಮಾಣಗೊಂಡ ಬ್ಯಾಸ್ಕೆಟ್ ಬಾಲ್ ಅಂಕಣ.

Zilla Panchayath Tumkur
Mgnregs Karnataka
RDPR Karnataka
Rural Development and Panchayat Raj - Government of Karnataka



ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಣ್ಣನಹಳ್ಳಿ ಗ್ರಾಮದ ರೈತ ರವಿಚಂದ್ರರವರು ತಮ್ಮ ಜಮೀನಿನಲ್...
30/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಣ್ಣನಹಳ್ಳಿ ಗ್ರಾಮದ ರೈತ ರವಿಚಂದ್ರರವರು ತಮ್ಮ ಜಮೀನಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಕಂದಕ ಬದು ನಿರ್ಮಾಣ ಮಾಡಿಕೊಂಡಿದ್ದು, ಇತ್ತೀಚಿಗೆ ಸುರಿದ ಮಳೆಯಿಂದಾಗಿ ಬದುಗಳಲ್ಲಿ ಮಳೆ ನೀರು ಸಂಗ್ರಹಗೊಂಡಿದೆ.

Zilla Panchayath Tumkur
Mgnregs Karnataka
RDPR Karnataka
Rural Development and Panchayat Raj - Government of Karnataka



ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದವಾರ ಗ್ರಾಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾ...
30/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದವಾರ ಗ್ರಾಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಲ್ಲೂಕುಮಟ್ಟದ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ, ಗ್ರಾಮದ ಸಮಗ್ರ ಸ್ವಚ್ಚತೆಯನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿನ ರಸ್ತೆ, ಚರಂಡಿ, ಜಲ ಮೂಲಗಳನ್ನು ಸ್ವಚ್ಚತೆಗೊಳಿಸಿರುವ ಬಗ್ಗೆ ಪಿಡಿಒ ರವರಿಂದ ಮಾಹಿತಿ ಪಡೆದು, ಅಗತ್ಯ ನಿರ್ದೇಶನ ನೀಡಲಾಯಿತು.

ಈ ಸಂದರ್ಭದಲ್ಲಿ ತೀತಾ ಗ್ರಾ.ಪಂ. ಅಧ್ಯಕ್ಷರು, ಪಿಡಿಒ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ಆಶಾ ಕಾರ್ಯಕರ್ತರು ಹಾಜರಿದ್ದರು.

Zilla Panchayath Tumkur
DC Tumakuru
Rural Development and Panchayat Raj - Government of Karnataka
Dho Tumkur

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ  ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಮಹಿಳಾ ಸ್ತ್ರೀ ಶಕ್ತಿ ಸಂಘಗಳ ಮಹಿ...
30/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಮಹಿಳಾ ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರಿಗೆ ತುಮಕೂರು ಲೋಕಾಯುಕ್ತ ಪೊಲೀಸ್‌ ಉಪಾಧೀಕ್ಷಕರಾದ ಶ್ರೀ ಬಿ.ಉಮಾಶಂಕರ್‌ರವರ ನೇತೃತ್ವದಲ್ಲಿ `ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ' ಹಮ್ಮಿಕೊಳ್ಳಲಾಯಿತು. ಇದೇ ವೇಳೆ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಸಹಾಯಕ ನಿರ್ದೇಶಕರು(ಗ್ರಾ.ಉ) ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಹಾಗೂ ತುಮಕೂರು ಲೋಕಾಯುಕ್ತ ಪೊಲೀಸ್‌ ಸಿಬ್ಬಂದಿ ಹಾಜರಿದ್ದರು.

Zilla Panchayath Tumkur
DC Tumakuru
RDPR Karnataka
Karnataka Lokayukta




ತುಮಕೂರು ಜಿಲ್ಲೆಗೆ ಕೇಂದ್ರ ತಂಡ ಭೇಟಿ, ಪರಿಶೀಲನೆತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ...
29/10/2024

ತುಮಕೂರು ಜಿಲ್ಲೆಗೆ ಕೇಂದ್ರ ತಂಡ ಭೇಟಿ, ಪರಿಶೀಲನೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿಗಳಾದ ಶ್ರೀ ಟಿ.ಕೆ. ಅನಿಲ್ ಕುಮಾರ್ ರವರು ಮತ್ತು ತಂಡ ಭೇಟಿ ನೀಡಿ, ತುಮಕೂರು ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಮೇಲ್ವಿಚಾರಣೆ ನಡೆಸಿದರು.
ಮೊದಲಿಗೆ ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 17.5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಎನ್ಆರ್ಎಲ್ಎಂ ಸಂಜೀವಿನಿ ಘಟಕಕ್ಕೆ ಭೇಟಿ ನೀಡಿ, ಘಟಕವನ್ನು ವೀಕ್ಷಿಸಿದರು.
ಅಲ್ಲದೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ 48 ಮಹಿಳಾ ಸ್ವಸಹಾಯ ಸಂಘಗಳ ಸುಮಾರು 450ಕ್ಕೂ ಅಧಿಕ ಸದಸ್ಯರುಗಳು ಎನ್ಆರ್ಎಲ್ಎಂ ಸಂಜೀವಿನಿ ಯೋಜನೆಯಡಿ ಈವರೆಗೆ 45 ಲಕ್ಷ ರೂ.ಗಳ ಸಾಲ ಸೌಲಭ್ಯ ಪಡೆದು, 1.27 ಕೋಟಿ ರೂ.ಗಳ ವಹಿವಾಟು ನಡೆಸಿರುವ ಬಗ್ಗೆ ಶ್ರೀ ಕಾವೇರಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರೊಂದಿಗೆ ಸಂವಾದ ನಡೆಸಿದರು.
ಇದೇ ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮೀ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ಸಿದ್ದಪಡಿಸಿದ ಹಪ್ಪಳ, ಮಸಾಲ ಪದಾರ್ಥಗಳು, ವಿವಿಧ ಬಗೆಯ ಚಟ್ನಿಪುಡಿ ಹಾಗೂ ಸಿರಿಧಾನ್ಯ ಮಾಲ್ಟ್ಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿದರು. ಇದೇ ವೇಳೆ ಶ್ರೀ ಲಕ್ಷ್ಮೀ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಮಹಿಳೆಯರು ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಯೋಜನೆಯಡಿ ಸಬ್ಸಿಡಿ ದರದಲ್ಲಿ ಹಪ್ಪಳ ತಯಾರಿಕಾ ಯಂತ್ರವನ್ನು ಖರೀದಿಸಿದ್ದು, ಯಂತ್ರದ ಮೂಲಕ ಹಪ್ಪಳ ತಯಾರಿಸುವ ಪ್ರಕ್ರಿಯೆಯನ್ನು ವೀಕ್ಷಿಸಿದರು.
ಬಳಿಕ ಇರಕಸಂದ್ರ ಕಾಲೋನಿ ವೃತ್ತದಲ್ಲಿ ಏರ್ಪಡಿಸಿದ್ದ ಮಾಸಿಕ ಸಂತೆ ಮೇಳಕ್ಕೆ ಕೇಂದ್ರ ತಂಡವು ಭೇಟಿ ನೀಡಿ, ಕೊರಟಗೆರೆ ತಾಲ್ಲೂಕಿನ ಎನ್ಆರ್ಎಲ್ಎಂ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿದರು. ಸ್ವಸಹಾಯ ಸಂಘದ ಸದಸ್ಯರು ತಯಾರಿಸುವ ಎಲ್ಲಾ ಉತ್ಪನ್ನಗಳಿಗೂ ಏಕರೂಪದ ಬ್ರಾಂಡಿಂಗ್ ಮಾಡಿಸಿ ವ್ಯಾಪಕ ವಹಿವಾಟು ನಡೆಸುವಂತೆ ಜಿಪಿಎಲ್ಎಫ್ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸೂಚಿಸಿದರು.
ಆ ನಂತರ ಇರಕಸಂದ್ರ ಕಾಲೋನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 9.40 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ಭೋಜನಾಲಯ ಹಾಗೂ 5.20 ಲಕ್ಷ ರೂ. ಅಂದಾಜುವೆಚ್ಚದಲ್ಲಿ ನಿರ್ಮಾಣಗೊಂಡ ಬ್ಯಾಸ್ಕೆಟ್ಬಾಲ್ ಅಂಕಣ ಕಾಮಗಾರಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶ್ರೀ ಪವನ್‌ಕುಮಾರ್ ಮಾಲಪಾಟಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಶ್ರೀಶೈಲ ದಿಡ್ಡಿಮನಿ, ಎನ್ಆರ್‌ಎಲ್‌ಎಂ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀವಿದ್ಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು.ಜಿ, ಉಪ ಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಯ್ಯ, ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ ಅನಂತರಾಮು, ಸಹಾಯಕ ನಿರ್ದೇಶಕ(ಗ್ರಾ.ಉ.)ರಾದ ಗುರುಮೂರ್ತಿ, ತಾಲ್ಲೂಕು ಯೋಜನಾಧಿಕಾರಿ ಮಧುಸೂದನ್, ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಾರ್ವತಮ್ಮ, ಉಪಾಧ್ಯಕ್ಷರಾದ ರಮ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ನರೇಗಾ ತಾಲ್ಲೂಕು ತಾಂತ್ರಿಕ ಸಂಯೋಜಕರ ಮಧು, ತಾಂತ್ರಿಕ ಸಹಾಯಕ ದಿಲೀಪ್, ಪಿಡಿಒ ಮಂಜುಳ ಮತ್ತಿತರರು ಹಾಜರಿದ್ದರು.

Zilla Panchayath Tumkur
Mgnregs Karnataka
RDPR Karnataka
Rural Development and Panchayat Raj - Government of Karnataka




ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದ...
28/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ತಂಡವು ಕೊರಟಗೆರೆ ತಾಲ್ಲೂಕಿನ ನೀಲಗೊಂಡನಹಳ್ಳಿ ಹಾಗೂ ಮಾವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕಾಮಗಾರಿಗಳನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ರಾಜ್ಯ ತಂಡದ ಸಹಾಯಕ ನಿರ್ದೇಶಕರುಗಳಾದ ಮಮತ, ತ್ಯಾಗರಾಜ್‌ , ತುಮಕೂರು ಜಿ.ಪಂ. ಉಪಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಸಂಜೀವಪ್ಪ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಪೂರ್ವ ಸಿ ಅನಂತರಾಮು, ಸಹಾಯಕ ನಿರ್ದೇಶಕ(ಗ್ರಾ.ಉ.)ರಾದ ಗುರುಮೂರ್ತಿ, ಸೇರಿದಂತೆ ಪಿಡಿಒ, ತಾಂತ್ರಿಕ ಸಿಬ್ಬಂದಿ ಹಾಜರಿದ್ದರು.
Zilla Panchayath Tumkur
Mgnregs Karnataka
Zilla Panchayath - Tumkur


ಸಂಜೀವಿನಿ ಮಾಸಿಕ ಸಂತೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಗ್ರಾಮ ಪಂಚಾಯಿತಿಯ ಸಮೃದ್ಧಿ ಸಂಜೀವಿನಿ GPLF ಒಕ್ಕೂಟ ವತಿಯಿಂದ ಕೋಳಾಲ ಗ...
25/10/2024

ಸಂಜೀವಿನಿ ಮಾಸಿಕ ಸಂತೆ
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಗ್ರಾಮ ಪಂಚಾಯಿತಿಯ ಸಮೃದ್ಧಿ ಸಂಜೀವಿನಿ GPLF ಒಕ್ಕೂಟ ವತಿಯಿಂದ ಕೋಳಾಲ ಗ್ರಾಮದ ಸಂತೆ ಮೈದಾನದಲ್ಲಿ ʻಸಂಜೀವಿನಿ ಮಾಸಿಕ ಸಂತೆʼ ಆಯೋಜಿಸಲಾಯಿತು.
ಮಾಸಿಕ ಸಂತೆಯಲ್ಲಿ ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಮಸಾಲ ಪದಾರ್ಥಗಳು, ಸಿರಿಧಾನ್ಯಗಳಿಂದ ತಯಾರಿಸಿದ ಉತ್ಪನ್ನಗಳು, ಗೃಹ ಬಳಕೆ ಮತ್ತು ಅಲಂಕಾರಿಕ ವಸ್ತುಗಳು, ಹಪ್ಪಳ, ಉಪ್ಪಿನಕಾಯಿ, ಸಿದ್ದಉಡುಪುಗಳು, ಬಳೆಗಳು, ವಿವಿಧ ಬಗೆಯ ತರಕಾರಿ, ಚಕ್ಕುಲಿ, ಕೋಡುಬಳೆ, ನಿಪ್ಪಟ್ಟು ಸೇರಿದಂತೆ ವಿವಿಧ ಬಗೆಯ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು.
ಮಾಸಿಕ ಸಂತೆಯನ್ನು ಕೋಳಾಲ ಗ್ರಾಮ ಪಂಚಾಯಿತಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾಯ೯ದಶಿ೯ಗಳು ಹಾಗೂ ಪಿಡಿಒ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರು, ಸಮೃದ್ಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸ್ವ ಸಹಾಯ ಗುಂಪುಗಳ ಸದಸ್ಯರು, ಟಿಎಂಎಂಯು, ಎಂಬಿಕೆ, ಎಲ್.ಸಿ.ಆರ್.ಪಿ., ಕೃಷಿ ಸಖಿ, ಪಶುಸಖಿಯವರು ಹಾಜರಿದ್ದರು.
Zilla Panchayath Tumkur
RDPR Karnataka



ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಲಿಂಗನಹಟ್ಟಿ ಗ್ರಾಮದಲ್ಲಿ ಕೊಳವೆ ಬಾವಿ  ಕೊರೆಸಲು ಮಾನ್ಯ ...
25/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾಲಿಂಗನಹಟ್ಟಿ ಗ್ರಾಮದಲ್ಲಿ ಕೊಳವೆ ಬಾವಿ ಕೊರೆಸಲು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕೊರಟಗೆರೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಭೇಟಿ ನೀಡಿ ಜಂಟಿ ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಹಾಜರಿದ್ದರು.
Zilla Panchayath Tumkur
Kirthi Naik
RDPR Department Of Karnataka

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಗ್ರಾಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿ...
25/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಗ್ರಾಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ, ರಸ್ತೆ, ಚರಂಡಿ ಸ್ವಚ್ಚತೆ ಸೇರಿದಂತೆ ಸಮಗ್ರ ಗ್ರಾಮ ನೈರ್ಮಲ್ಯವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪಿಡಿಒ, ಗ್ರಾ.ಪಂ. ಸಿಬ್ಬಂದಿ ಹಾಜರಿದ್ದರು.
Zilla Panchayath Tumkur
RDPR Karnataka

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ...
25/10/2024

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಗುಟ್ಟರಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿಗೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ, ಮಕ್ಕಳ ಹಾಜರಾತಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಪಿಡಿಒ ಹಾಜರಿದ್ದರು.

Zilla Panchayath Tumkur
RDPR Karnataka

Address

Koratagere
Tumkur

Telephone

+918867437456

Website

Alerts

Be the first to know and let us send you an email when EO TP Koratagere posts news and promotions. Your email address will not be used for any other purpose, and you can unsubscribe at any time.

Contact The School

Send a message to EO TP Koratagere:

Shortcuts

Share

Category