Department of Women And Child Development, Tumakuru

Department of Women And Child Development, Tumakuru

Share

Information related to the welfare of Women and Children, WCD Tumkur

25/03/2026

ತುಮಕೂರು ಗ್ರಾಮಾಂತರ ತಾಲ್ಲೂಕಿನ ಬೆಳ್ಳಾವಿ-2 ನೇ ವೃತ್ತದ ಲಿಂಗನಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳ ಆಟದ ಮೂಲಕ ಪಾಠ

Photos from Department of Women And Child Development, Tumakuru's post 20/03/2026

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ಇವರ ವತಿಯಿಂದ ಇಂದು ಬಾಲ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾನ್ಯ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ್ ಅವರು ಉಪಸ್ಥಿತರಿದ್ದರು. ತುಮಕೂರು ಜಿಲ್ಲೆಯ ಜಿಲ್ಲಾಮಟ್ಟದ ಮಹಿಳಾ ಅಧಿಕಾರಿಗಳು ಹಾಗೂ ಪ್ರತಿ ತಾಲ್ಲೂಕಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಒಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು

Photos from Department of Women And Child Development, Tumakuru's post 12/03/2026

ದಿನಾಂಕ: 11-03-2026 ರಂದು PM Awards ಸಲುವಾಗಿ ಕೇಂದ್ರ ಸರ್ಕಾರದ ತಂಡವು ತುಮಕೂರು ಗ್ರಾಮಾಂತರ ಯೋಜನೆಯ ಊರುಕೆರೆ ಅಂಗನವಾಡಿ ಕೇಂದ್ರಕ್ಕೆ ಬೇಟಿ ನೀಡಿ ಯೋಜನಾ ಕಾರ್ಯಕ್ರಮಗಳನ್ನು ಪರಿಶೀಲಿಸಲಾಯಿತು.

Photos from Department of Women And Child Development, Tumakuru's post 12/03/2026

ದಿನಾಂಕ:10-03-2026ರಂದು ತುಮಕೂರು ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ತಾತ್ಕಾಲಿಕ ಆಯ್ಕೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಲಾಯಿತು

12/03/2026

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವಧನ ಸೇವಾ ಹುದ್ದೆಗಳನ್ನು ಭರ್ತಿ ಮಾಡಲು ದಿನಾಂಕ:10-03-2026 ರಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಜಿಲ್ಲಾಮಟ್ಟದ ಆಯ್ಕೆ ಸಮಿತಿ, ತುಮಕೂರು ರವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಆಯ್ಕೆ ಕುರಿತು ಆಕ್ಷೇಪಣೆ ಸಲ್ಲಿಸಲು ದಿನಾಂಕ:23-03-2026 ರವರೆಗೆ ಕಾಲಾವಕಾಶ ಕಲ್ಪಿಸಲಾಗಿದ್ದು, ಆಕ್ಷೇಪಣೆಗಳನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ. ಸಾರ್ವಜನಿಕರ ಮಾಹಿತಿಗಾಗಿ ಆಯ್ಕೆ ಪಟ್ಟಿಯನ್ನು ಸಂಬ0ಧಪಟ್ಟ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿಶು ಅಭಿವೃದ್ಧಿ ಯೋಜನಾ ಕಛೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

11/03/2026

ಪಾವಗಡ ತಾಲ್ಲೂಕಿನ K.T ಹಳ್ಳಿ ವೃತ್ತದ ಅಂಗನವಾಡಿ ಕೇಂದ್ರದ ಮಕ್ಕಳ ಶಾಲಾ ಪೂರ್ವ ಶಿಕ್ಷಣ

09/03/2026
09/03/2026

ಮಧುಗಿರಿ ತಾಲ್ಲೂಕಿನ ಮರುವೇಕೆರೆ ವೃತ್ತದ ಅಂಗನವಾಡಿ ಕೇಂದ್ರಗಳ ಮಕ್ಕಳ ಆಟ ಪಾಠ

Photos from Department of Women And Child Development, Tumakuru's post 04/03/2026

ಶ್ರೀ ಲಕ್ಷ್ಮಿ ಆಹಾರೋತ್ಪನ್ನಗಳ ಮಾರಾಟ ಮಹಿಳಾ ಸಹಕಾರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೋರ ಹೋಬಳಿಯ ಮಳೆಕೋಟೆ ಗ್ರಾಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು

03/03/2026

ಗುಬ್ಬಿ ತಾಲ್ಲೂಕಿನ ಹಾಗಲವಾಡಿ ವೃತ್ತದ ಕುರೆಹಳ್ಳಿ ಅಂಗನವಾಡಿ ಕೇಂದ್ರದ ಮಕ್ಕಳಿಂದ ಶಾಲಾ ಪೂರ್ವ ಚಟುವಟಿಕೆ

Want your school to be the top-listed School/college in Tumkur?

Click here to claim your Sponsored Listing.

Location

Telephone

Website

Address


Bala Bhavan Complex, M. G Road
Tumkur
572101